×
Ad

ಜೂ.29ರಿಂದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Update: 2021-06-27 17:28 IST

ಬೆಂಗಳೂರು, ಜೂ. 27: ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂ.29ರಿಂದ ಜುಲೈ 1ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು, ಈ ಪ್ರಭಾವದಿಂದ ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಜೂ.29, 30 ಹಾಗೂ ಜು.1ರಂದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಜೂ.30 ಮತ್ತು ಜು.1ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News