ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಮಾದಕ ವಸ್ತು ಸೇವನೆ ವಿರೋಧಿ ಜಾಗೃತಿ ಕಾರ್ಯಕ್ರಮ

Update: 2021-06-27 12:06 GMT

ಮುಡಿಪು, ಜೂ.27: ಅಂತರಾಷ್ಟ್ರೀಯ ಮಾದಕ ಪದಾರ್ಥ ಸೇವನೆ ನಿಷೇಧ ದಿನದ ಪ್ರಯುಕ್ತ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲೆ (ವೆಸ್ಟ್) ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ದುಆ ನೆರವೇರಿಸಿದರು. ಎಸ್ಸೆಸ್ಸೆಫ್ ಮುಡಿಪು ಡಿವಿಶನ್  ಅಧ್ಯಕ್ಷ ಮನ್ಸೂರ್ ಹಿಮಮಿ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್ಸೆಸ್ಸೆಫ್ ದ.ಕ ಜಿಲ್ಲೆ ( ವೆಸ್ಟ್ ) ಕ್ಯಾಂಪಸ್ ಕಾರ್ಯದರ್ಶಿ ಝುಹೈರ್ ಮಾಸ್ಟರ್, 'ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗುತ್ತಿದ್ದಾರೆ. ಇದರ ಬಗ್ಗೆ ಎಸ್ಸೆಸ್ಸೆಫ್ ಹಲವಾರು ವರ್ಷಗಳಿಂದ ಸ್ವಾಸ್ಥ್ಯ ಸಂಕಲ್ಪದ ಮೂಲಕ ಮಾಹಿತಿ ಮಾರ್ಗದರ್ಶನಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಇಂತಹ ಮಾಹಿತಿ ನೀಡುವುದರಿಂದ ಉತ್ತಮ ಜೀವನ ನಡೆಸುವ ಬಗ್ಗೆ ತಿಳಿದುಕೊಳ್ಳುತ್ತಾರೆ' ಎಂದರು. 

ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಉಬೈದುಲ್ಲಾಹ್ ಆರ್.ಜಿ ನಗರ ಮುನ್ನುಡಿ ಭಾಷಣ ಮಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬಂಟ್ವಾಳ ಠಾಣಾ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಎಮ್.ಎಸ್. ರವರು ಮಾತನಾಡಿ, ಮಾದಕ ದ್ರವ್ಯ ಇತ್ತೀಚೆಗೆ ಜನರ ಮೇಲೆ ಪ್ರಭಾವ ಬೀರುತ್ತಿದೆ. ಇತ್ತೀಚಿನ ದಿನಗಳಲ್ಲಿ ಕುಡಿತವೊಂದೇ ಅಲ್ಲದೆ ಡ್ರಗ್ಸ್, ಅಫೀಮು, ಗಾಂಜಾ, ಸಿಗರೇಟು ಇತ್ಯಾದಿ ವಸ್ತುಗಳನ್ನು ಬಳಸಿಕೊಂಡು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇಂದಿನ ದಿನಗಳಲ್ಲಿ ಕುಡಿತವಿಲ್ಲದೇ ಇರುವ ಕುಟುಂಬಗಳನ್ನು ಹುಡುಕಿದರೂ ಕೂಡ ಸಿಗದೇ ಇರುವಂತಹ ಪರಿಸ್ಥಿತಿ. ಆದುದರಿಂದ ನಾವೆಲ್ಲ ಜಾಗೃತರಾಗಿ ಮುಂದಿನ ಪೀಳಿಗೆಯವರು ಈ ವಸ್ತುಗಳಿಂದ ದೂರವಿರುವಂತೆ ಎಚ್ಚರ ವಹಿಸಿ ಜೀವನವನ್ನು ನಡೆಸಬೇಕೆಂದ ಅವರು, ಇಂತಹ ಕಾರ್ಯಕ್ರಮಗಳನ್ನು ಎಸ್ಸೆಸ್ಸೆಫ್ ಹಮ್ಮಿಕೊಂಡಿರುವುದು ತುಂಬಾ ಹೆಮ್ಮೆಯ ವಿಚಾರ ಎಂದು ಸಂತೋಷ ವ್ಯಕ್ತಪಡಿಸಿದರು.

ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಪ್ರ.ಕಾರ್ಯದರ್ಶಿ ನೌಷಾದ್ ಮದನಿ ಎಚ್.ಕಲ್ಲು ಸ್ವಾಗತಿಸಿ, ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕಾರ್ಯದರ್ಶಿ ಝೈನುದ್ದೀನ್ ಇರಾ ವಂದಿಸಿದರು. ಕ್ಯಾಂಪಸ್ ಕನ್ವೀನರ್ ಸಮದ್ ಮೊಂಟೆಪದವು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News