ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ವಿರುದ್ಧ ಅವಹೇಳನ : ದೂರು
Update: 2021-06-27 17:56 IST
ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ಬಿರುವೆರ್ ಕುಡ್ಲ ಸಂಘಟನೆ’ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದೆ.
ರಶೀದ್ ಟಿಪ್ಪು ಎಂಬ ಹೆಸರಿನ ವ್ಯಕ್ತಿ ಫೇಸ್‌ಬುಕ್ ಖಾತೆಯಲ್ಲಿ ಜನಾರ್ದನ ಪೂಜಾರಿಯ ವಿಚಾರದಲ್ಲಿ ಸಂದೇಶ ವೊಂದನ್ನು ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.