ಮಂಗಳೂರು: ಕೆಂಪೇಗೌಡ ಜಯಂತಿ ಆಚರಣೆ
Update: 2021-06-27 22:30 IST
ಮಂಗಳೂರು, ಜೂ.27: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಕೆಂಪೇಗೌಡ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೂಡ ಅಧ್ಯಕ್ಷ ರವಿಶಂಕರ ಮಿಜಾರ್, ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಡಾ. ದಾಮೋದರ ನಾರಾಲು, ಕಾರ್ಯದರ್ಶಿ ಕೆ.ರಾಮಣ್ಣ ಗೌಡ, ಸಂಘದ ಸೇವಾ ಯುವ ಘಟಕದ ನಿರ್ದೇಶಕ ಮಹೇಶ್ ಮೊಂಟಡ್ಕ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿ, ವಂದಿಸಿದರು.