×
Ad

ರಿಕ್ಷಾ ಚಾಲಕರಿಗಾಗಿ ಉಚಿತ ಲಸಿಕೆ ಶಿಬಿರ

Update: 2021-06-27 22:31 IST

ಮಂಗಳೂರು, ಜೂ.27: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್‌ಟಿಒ), ವಿಶ್ವವಿದ್ಯಾನಿಲಯ ಕಾಲೇಜು ಮತ್ತು ಯುವ ರೆಡ್ ಕ್ರಾಸ್ ವತಿಯಿಂದ ರಿಕ್ಷಾ ಚಾಲಕರಿಗಾಗಿ ಕೊವಿಡ್ ಉಚಿತ ಲಸಿಕೆ ಶಿಬಿರವು ರವಿವಾರ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ಶಿಬಿರದಲ್ಲಿ ಸುಮಾರು 500 ಮಂದಿ ರಿಕ್ಷಾ ಚಾಲಕರಿಗೆ ಲಸಿಕೆ ನೀಡಲಾಯಿತು. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳೂರು ಆರ್‌ಟಿಒ ಆರ್.ಎಂ. ವರ್ಣೇಕರ್, ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ವಿವಿ ಕಾಲೇಜು ಮತ್ತು ಆರ್‌ಟಿಒ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News