×
Ad

ಎಸೆಸ್ಸೆಲ್ಸಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು: ವಾಟಾಳ್ ನಾಗರಾಜ್

Update: 2021-06-28 18:39 IST

ಬೆಂಗಳೂರು, ಜೂ.28: ರಾಜ್ಯ ಸರಕಾರ ಎಸೆಸ್ಸೆಲ್ಸಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ ಎರಡನೆ ವಾರ ಎಸೆಸ್ಸೆಲ್ಸಿ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಎಸೆಸ್ಸೆಲ್ಸಿ ಪರೀಕ್ಷೆ ಮಾಡಬಾರದು. ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಡಾ. ದೇವಿ ಶೆಟ್ಟಿ ವರದಿಯಲ್ಲಿ ಸಂಪೂರ್ಣ ಲಸಿಕೆ ನಂತರ ಶಾಲೆ ಆರಂಭ ಮಾಡಬೇಕು ಎಂದಿದೆ. ಅಲ್ಲದೆ, ಸುಮಾರು 10 ಲಕ್ಷ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ಸೇರಿ 25 ಲಕ್ಷ ಪರೀಕ್ಷೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಜೀವ ಮುಖ್ಯ ಎಂದರು.

ಸುರೇಶ್ ಕುಮಾರ್ ಅವರೇ ಹಠಕ್ಕೆ ಬೀಳಬೇಡಿ. ಅತ್ಯಂತ ಗಂಭೀರವಾದ ಪರಿಸ್ಥಿತಿಯಿದೆ ಎಂದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಇನ್ನು, ಎಸೆಸ್ಸೆಲ್ಸಿ ಪರೀಕ್ಷೆ ರದ್ದಾದರೆ ಏನೂ ತೊಂದರೆ ಆಗುವುದಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News