×
Ad

ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆ ಪತ್ತೆಯಾದ ಯುವಕರ ಬಂಧನ: ಪೊಕ್ಸೊ ಪ್ರಕರಣ ದಾಖಲು

Update: 2021-06-28 23:27 IST

ಮಂಗಳೂರು, ಜೂ.28: ನಗರದ ವಸತಿಗೃಹದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆ ರವಿವಾರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ ಬಂಧಿತ ಆರೋಪಿಗಳು. ಇವರು ನಗರದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಇನ್ನೊಬ್ಬ ಯುವತಿಯ ಜೊತೆ ಇದ್ದರು ಎನ್ನಲಾಗಿದೆ.

ಹೊರಜಿಲ್ಲೆಯ ಈ ವಿದ್ಯಾರ್ಥಿನಿ ನಗರದ ಕಾಲೇಜೊಂದರಲ್ಲಿ ಕಲಿಯುತ್ತಿದ್ದು, ಅಪ್ರಾಪ್ತೆಯಾಗಿದ್ದಾಳೆ. ಇನ್ನೊಬ್ಬಳು ಸುರತ್ಕಲ್ ನಿವಾಸಿ ಎನ್ನಲಾಗಿದೆ. ನಗರದ ಲಾಡ್ಜ್‌ವೊಂದರಲ್ಲಿ ಉಳಿದುಕೊಂಡಿದ್ದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಇವರು ಲಾಡ್ಜ್‌ನವರಿಗೆ ಸಂಶಯ ಬರಬಾರದೆಂದು ಎಂಬ ನಿಟ್ಟಿನಲ್ಲಿ ಪ್ರತ್ಯೇಕ ರೂಮ್ ಬುಕ್ ಮಾಡಿದ್ದರು ಎಂದು ತಿಳಿದು ಬಂದಿದೆ.

ಆರೋಪಿಗಳನ್ನು ಯಾರೋ ಕಾರಿನಲ್ಲಿ ತಂದುಬಿಟ್ಟು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಮಹಿಳಾ ಪೊಲೀಸರು ರಕ್ಷಿಸಿ ಬಾಲಮಂದಿರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ಹೋಗಿ ಲಾಡ್ಜ್‌ನಲ್ಲಿ ಉಳಿದುಕೊಂಡ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News