ಮಾದಕ ವಸ್ತು ಮಾರಾಟ: ಆರೋಪಿಯ ಸೆರೆ, ಒಂದು ಕೆಜಿಗೂ ಅಧಿಕ ಅಫೀಮು ವಶ
Update: 2021-06-29 10:17 IST
ಬೆಂಗಳೂರು, ಜೂ.29: ನಗರದ ಗ್ರೈನ್ ಬಝಾರ್ ನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ಮೈಸೂರು ರಸ್ತೆಯ ನಾಯಂಡಹಳ್ಳಿ ಸಿ.ವಿ. ಗಾರ್ಡನ್ ನಿವಾಸಿ ಬೇರಾರಾಮ್ (33) ಬಂಧಿತ ಆರೋಪಿ. ಈತನಿಂದ ಒಂದು ಕೆ.ಜಿ. 50 ಗ್ರಾಂ ತೂಕದ ಅಫೀಮು, 2,050 ರೂ. ನಗದು, ಒಂದು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಸೋಮವಾರ ಬೆಳಗ್ಗೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ನ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.