×
Ad

ನನ್ನೊಂದಿಗೆ ಚರ್ಚಿಸಿಯೇ ಎಸೆಸೆಲ್ಸಿ ಪರೀಕ್ಷೆ ದಿನಾಂಕ ನಿಗದಿ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-06-29 11:31 IST

ಬೆಂಗಳೂರು, ಜೂ.29: ಎಸೆಸೆಲ್ಸಿ ಪರೀಕ್ಷೆ ದಿನಾಂಕ ನಿಗದಿಪಡಿಸುವುದಕ್ಕಿಂತ ಮೊದಲು ಶಿಕ್ಷಣ ಸಚಿವ ಎಸ್.ಸುರೆಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ ವಿಚಾರವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡುವೆ ಜಟಾಪಟಿ ನಡೆದಿದೆ. ಎಸೆಸೆಲ್ಸಿ ಪರೀಕ್ಷೆ ದಿನಾಂಕ ನಿಗದಿಪಡಿಸುವ  ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಸಿಲ್ಲ ಎಂದು ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿದ್ದು, ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಮುಖ್ಯಮಂತ್ರಿ  ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News