×
Ad

ಮಹಿಳಾ ಕಾಂಗ್ರೆಸ್ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಜೆ.ಜಯಲಕ್ಷ್ಮಮ್ಮ ನೇಮಕ

Update: 2021-06-29 18:58 IST

ಬೆಂಗಳೂರು, ಜೂ. 39: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೆ.ಜೆ.ಜಯಲಕ್ಷ್ಮಮ್ಮ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಶ್ರಮಿಸುತ್ತೀರೆಂಬ ಆಶಯದೊಂದಿಗೆ ತಮಗೆ ಈ ಜವಾಬ್ದಾರಿಯನ್ನು ವಹಿಸುತ್ತಿದ್ದೇನೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಿ.ಪುಷ್ಪಾ ಅಮರನಾಥ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News