ವೃದ್ಧನ ಮೇಲೆ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಸಹೋದರನಿಂದ ಹಲ್ಲೆ: ಆರೋಪ

Update: 2021-06-29 15:03 GMT

ಹೊಸಪೇಟೆ, ಜೂ.29: ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ ಶಿವಾಜಿನಾಯ್ಕ್ ಎಂಬಾತ ವೃದ್ದನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ವಿಜಯನಗರ ಜಿಲ್ಲೆ ಲಕ್ಷ್ಮೀಪುರ ಸ್ವಗ್ರಾಮದ ವೃದ್ಧ ಶರಣ ನಾಯ್ಕ್ ಎಂಬವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯಾವ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿಲ್ಲ. ಆದರೆ, ಘಟನೆ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News