ದ.ಕ. ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ 15 ಮಂದಿ ಬಲಿ
Update: 2021-06-29 20:46 IST
ಮಂಗಳೂರು, ಜೂ.29: ದ.ಕ.ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾಗುತ್ತಿರುವ ಸಂಖ್ಯೆ ಮತ್ತೆ ಹೆಚ್ಚಿದೆ. ಮಂಗಳವಾರ 15 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,180ಕ್ಕೇರಿದೆ.
ಮಂಗಳವಾರ 385 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 92,513ಕ್ಕೇರಿದೆ. ಅಲ್ಲದೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ. 4.73ಕ್ಕೇರಿದೆ.
ಮಂಗಳವಾರ 744 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 86,295ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 5,038 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,35,625 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 9,43,112 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 76,250 ಮಂದಿಯಿಂದ 92,95,317 ರೂ. ದಂಡ ವಸೂಲು ಮಾಡಲಾಗಿದೆ.