​ಹೊರಜಿಲ್ಲೆಗಳಲ್ಲಿ ಕಲಿಯುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗೆ ಕೋವಿಡ್ ಲಸಿಕೆ ನೀಡಲು ಮಾಹಿತಿ

Update: 2021-06-29 15:47 GMT
ಸಾಂದರ್ಭಿಕ ಚಿತ್ರ

ಉಡುಪಿ, ಜೂ.29:ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯ ಹೊಂದಿ ಇತರ ಜಿಲ್ಲೆ/ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾವು ವಾಸ್ತವ್ಯ ಹೊಂದಿರುವ ಉಡುಪಿ ಜಿಲ್ಲೆಯಲ್ಲಿಯೇ ಲಸಿಕೀಕರಣ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಬಗ್ಗೆ ವಿವರಗಳನ್ನು ಸಂಗ್ರಹಿಸುತ್ತಿದೆ.

ಆದುದರಿಂದ ಕೋವಿಡ್-19 ಲಸಿಕೆಯನ್ನು ಉಡುಪಿ ಜಿಲ್ಲೆಯಲ್ಲಿ ಪಡೆಯಲಿಚ್ಛಿಸುವ ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯ ಹೊಂದಿ ಅನ್ಯ ಜಿಲ್ಲೆ/ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಈ ಕೆಳಗಿನ ಲಿಂಕ್‌ನಲ್ಲಿ - https://docs.google.com/forms/d/e/1FAIpQLScLntiRTE7JnvnT-AwcllzmrrLCZe2aCkN_gu3U13VcnG8cug/viewform- ಭರ್ತಿ ಮಾಡುವಂತೆ ಸೂಚಿಸಲಾಗಿದೆ. ಲಸಿಕೆ ಲಭ್ಯತೆಗಳನ್ನು ಮುಂದಿನ ದಿನಗಳಲ್ಲಿ ಎಸ್‌ಎಂಎಸ್ ಮೂಲಕ ಅಥವಾ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾಕಾರಿ ಜಿ.ಜಗದೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬುಧವಾರ ಲಸಿಕೆ ಇಲ್ಲ: ಉಡುಪಿ ನಗರ ಪ್ರದೇಶದಲ್ಲಿ ಜೂ.30ರ ಬುಧವಾರ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ. ಅದೇ ರೀತಿ ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆ ಯಲ್ಲಿ ವಿದೇಶ ಪ್ರಯಾಣ ಮಾಡುವವರಿಗೂ ನಾಳೆ ಲಸಿಕೆ ಲಭ್ಯವಿರುವುದಿಲ್ಲ.

ಅಲ್ಲದೇ ಜಿಲ್ಲೆಯಲ್ಲಿ 18ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News