ಪ.ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ
Update: 2021-06-29 21:19 IST
ಉಡುಪಿ, ಜೂ.29: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಎರಡು ವರ್ಷಗಳ ತರಬೇತಿ ಅವಧಿಗೆ ಮಾಸಿಕ 10,000 ರೂ.ನಂತೆ ಶಿಷ್ಯವೇತನ ಹಾಗೂ ತರಬೇತಿಯ ಅವಧಿಯಲ್ಲಿ ಕಾನೂನು ವೃತ್ತಿಗೆ ಸಂಬಂಧಿಸಿದ ಪುಸ್ತಕ ಖರೀದಿಸಲು 5,000 ರೂ. ನೀಡುವ ಕುರಿತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ -ಡಿಡಿಡಿ.ಠಿಡಿ.ಚ್ಟ.್ಞಜ್ಚಿ.ಜ್ಞಿ- ಅಥವಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.