ಶಾಲಾ ಶುಲ್ಕ ವಿವಾದ: ಸಮಿತಿ ರಚನೆಯ ಮಧ್ಯಂತರ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್
Update: 2021-06-29 21:36 IST
ಬೆಂಗಳೂರು, ಜೂ.29: ಶಾಲಾ ಶುಲ್ಕ ವಿವಾದ ಬಗೆಹರಿಸಲು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ಕೋರಿ ರಾಜ್ಯ ಸರಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಶಾಲಾ ಶುಲ್ಕದಲ್ಲಿ ಶೇ.30ರಷ್ಟು ಕಡಿತ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸಲ್ಲಿಸಿರುವ ತಕರಾರು ಅರ್ಜಿ ಹಾಗೂ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಸರಕಾರ ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವಿನ ವಿವಾದವನ್ನು ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಅನುಮತಿ ಕೋರಿ ರಾಜ್ಯ ಸರಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಕೀಲರ ವಾದ ಆಲಿಸಿದ ನ್ಯಾಯಪೀಠ ಮಧ್ಯಂತರ ಅರ್ಜಿ ಸಂಬಂಧಿತ ಆದೇಶವನ್ನು ಕಾಯ್ದಿಸಿರಿ, ಮೂಲ ಅರ್ಜಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತು.