×
Ad

ಉ.ಪ್ರ. ಪೊಲೀಸರ ನೋಟಿಸ್ ಪ್ರಶ್ನಿಸಿ ಹೈಕೋರ್ಟ್‌ಗೆ ಟ್ವಿಟರ್ ಇಂಡಿಯಾ ಮುಖ್ಯಸ್ಥರ ಅರ್ಜಿ:ಜು.5ಕ್ಕೆ ವಿಚಾರಣೆ ಮುಂದೂಡಿಕೆ

Update: 2021-06-29 21:42 IST
ಮನೀಶ್ ಮಹೇಶ್ವರಿ

ಬೆಂಗಳೂರು, ಜೂ.29: ಗಾಜಿಯಾಬಾದ್ ವಿಡಿಯೋ ಪ್ರಕರಣದಲ್ಲಿ ಉತ್ತರಪ್ರದೇಶ ಪೊಲೀಸರು ನೀಡಿರುವ ನೋಟಿಸ್ ಪ್ರಶ್ನಿಸಿ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜು.5ಕ್ಕೆ ಮುಂದೂಡಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‍ನ ಲೋನಿ ಬಾರ್ಡರ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಿಆರ್‍ಪಿಸಿ ಸೆಕ್ಷನ್ 41ರಡಿ ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಮನೀಶ್ ಮಹೇಶ್ವರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಗಾಜಿಯಾಬಾದ್‍ನಲ್ಲಿ ತಾಯಿತ ಮಾರುವ ಮುಸ್ಲಿಂ ವೃದ್ಧರೋರ್ವನಿಗೆ ಆರು ಜನರ ಗುಂಪೊಂದು ಥಳಿಸಿ ಅವರ ಗಡ್ಡ ಕತ್ತರಿಸಿ, ಬಲವಂತವಾಗಿ ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಎಂದು ಹೇಳಿಸಿದರೆಂದು ಆರೋಪಿಸಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿತ್ತು. ಈ ಸಂಬಂಧ ಗಾಜಿಯಾಬಾದ್‍ನ ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮನೀಶ್ ಮಹೇಶ್ವರಿ ಅವರಿಗೆ ಸಿಆರ್‍ಪಿಸಿ ಸೆಕ್ಷನ್ 41(ಎ) ಅಡಿ ನೋಟಿಸ್ ಜಾರಿ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News