ಬ್ರಹ್ಮಾವರ: ಜೂ.30ರಂದು ಉಚಿತ ಗಿಡಗಳ ವಿತರಣೆ
Update: 2021-06-29 21:54 IST
ಬ್ರಹ್ಮಾವರ: ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ವತಿಯಿಂದ ಪಂಚ ಪವಿತ್ರ ಗಿಡಗಳನ್ನು ದೇವಸ್ಥಾನ, ದೈವಸ್ಥಾನ, ಗರಡಿ, ಪ್ರಾರ್ಥನ ಮಂದಿರ, ನಾಗಬನದಲ್ಲಿ ನೆಡಲು ಉಚಿತವಾಗಿ ಜೂ.30ರ ಬುಧವಾರ ಬೆಳಗ್ಗೆ 10:30ಕ್ಕೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿರುವ ಭಾರತೀಯ ಜನೌಷಧಿ ಕೇಂದ್ರದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.