ಗುರುಪುರ ಮಠದಗುಡ್ಡೆಯ 48 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Update: 2021-06-29 17:09 GMT

ಮಂಗಳೂರು, ಜೂ.29: ಗುರುಪುರ ಗ್ರಾಪಂ ವ್ಯಾಪ್ತಿಯ ಮೂಳೂರು ಗ್ರಾಮದ ಮಠದಗುಡ್ಡೆಯ 48 ಕುಟುಂಬಗಳಿಗೆ ಹಾಗೂ ಅಡ್ಡೂರು ಗ್ರಾಮದ 1 ಕುಟುಂಬಕ್ಕೆ ಮಂಗಳವಾರ ಗುರುಪುರ ಕೈಕಂಬದ ಖಾಸಗಿ ಸಭಾಗೃಹದಲ್ಲಿ ಶಾಸಕ ಡಾ.ವೈ. ಭರತ್ ಶೆಟ್ಟಿ ಹಕ್ಕುಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಅವರು ಕ್ಷೇತ್ರ ವ್ಯಾಪ್ತಿಯ ಸುಮಾರು 4,000 ಕುಟುಂಬಗಳಿಗೆ ಹಕ್ಕುಪತ್ರ ನೀಡಿದ್ದರೂ ಇಂದಿನ ಹಕ್ಕುಪತ್ರ ನೀಡಿಕೆ ಕಾರ್ಯಕ್ರಮ ವಿಶಿಷ್ಟವಾಗಿದೆ. ಮಠದಗುಡ್ಡೆಯಲ್ಲಿ ಗುಡ್ಡ ಕುಸಿತ ಸಂಭವಿಸಿದ ಬಳಿಕ 70ಕ್ಕೂ ಹೆಚ್ಚು ಕುಟುಂಬಗಳು ನಿವೇಶನರಹಿತವಾಗಿವೆ ಹಾಗೂ ಇವರಲ್ಲಿ ಹೆಚ್ಚಿನವರಲ್ಲಿ ಹಕ್ಕುಪತ್ರವಿರಲಿಲ್ಲ. ಗ್ರಾಪಂ ಆಡಳಿತ, ಸದಸ್ಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಲವು ಬಾರಿ ಈ ಬಗ್ಗೆ ನಿವೇದಿಸಿಕೊಂಡಿದ್ದು, ಕಾನೂನು ತೊಡಕು ನಿವಾರಣೆಗಾಗಿ ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಿ ಕೇವಲ ಆರು ತಿಂಗಳೊಳಗೆ ಎಲ್ಲರಿಗೂ ಹಕ್ಕುಪತ್ರ ಸಿಗುವಂತೆ ಪ್ರಯತ್ನಿಸಿದ್ದೇನೆ ಎಂದರು.

ಗುರುಪುರ ನಾಡಕಚೇರಿ ಉಪ ತಹಶೀಲ್ದಾರ್ ಶಿವಪ್ರಸಾದ್, ಗುರುಪುರ ಗ್ರಾಪಂ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ, ಸದಸ್ಯರಾದ ರಾಜೇಶ್ ಸುವರ್ಣ, ಸಚಿನ್ ಅಡಪ, ನಳಿನಿ ಶೆಟ್ಟಿ, ಕಂದಾಯ ನಿರೀಕ್ಷಕ ನವನೀತ್ ಮಾಳವ, ಬಿಜೆಪಿ ಮುಖಂಡ ಸೋಹನ್ ಅತಿಕಾರಿ, ಪಿಡಿಒ ಅಬೂಬಕರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಾದ ದಿನೇಶ್, ಪವಿತ್ರಾ, ಜ್ಞಾನೇಶ್ವರಿ, ಯಮುನಪ್ಪಕೋರಿ, ಮೊಹಬೂನ್ ಸಾಬ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News