×
Ad

ಹಿರಿಯ ಏಳು ಐಎಎಸ್‌ ಅಧಿಕಾರಿಗಳ ವರ್ಗಾವಣೆ

Update: 2021-06-30 12:52 IST

ಬೆಂಗಳೂರು, ಜೂ.30: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಸೇರಿದಂತೆ ಹಿರಿಯ ಏಳು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ಸಿ.ಶಿಖಾ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

ಉಳಿದಂತೆ  ಸಲ್ಮಾ ಫಹೀಂ ಅವರನ್ನು ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ, ಕನಗವಲ್ಲಿ ಎಂ. ಅವರನ್ನು , ಕೆಪಿಎಸ್​​ಸಿ ಪರೀಕ್ಷಾ ನಿಯಂತ್ರಕರಾಗಿ, ರಘುನಂದನ್ ಮೂರ್ತಿಯವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ (ಜಾರಿ)ರಾಗಿ, ಅರ್ಚನಾ ಎಂ.ಎಸ್. ಅವರನ್ನು ಕೆಎಟಿ ಸದಸ್ಯರಾಗಿ ಮತ್ತು ರಮ್ಯಾ ಎಸ್. ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕಿಯಾಗಿ ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News