×
Ad

ದ.ಕ. ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಬಗ್ಗೆ ನಾಳೆ ಅಧಿಕೃತ ಆದೇಶ: ಸಚಿವ ಕೋಟ

Update: 2021-06-30 15:14 IST

ಬೆಳ್ತಂಗಡಿ, ಜೂ.30: ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಲಾಗಿದೆ. ಗುರುವಾರ(ಜು.1) ಈ ಬಗ್ಗೆ ಸರಕಾರದ ಅಧಿಕೃತ  ಆದೇಶ ಬರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೊಕ್ಕಡದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚವರು, ಜಿಲ್ಲೆಯಲ್ಲಿ ಇದೀಗ ಕೊರೋನ ಪಾಸಿಟಿವಿಟಿ ರೇಟ್ ಐದರ ಕೆಳಗೆ ಬಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 5 ಗ‌ಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News