ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲು

Update: 2021-06-30 10:45 GMT

ಹೊಸದಿಲ್ಲಿ: ಹಿರಿಯ ನಟ ನಾಸಿರುದ್ದೀನ್ ಷಾ (70) ಅವರಿಗೆ  ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು  ಮಂಗಳವಾರ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪತ್ನಿ ಹಾಗೂ  ನಟಿ ರತ್ನಾ ಪಾಠಕ್ ಶಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

 ನಾಸಿರುದ್ದೀನ್ ಷಾ ಅವರು ಖಾರ್‌ನ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ  ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಅವರು ಆಸ್ಪತ್ರೆಯಿಂದ ಶೀಘ್ರವೇ ಬಿಡುಗಡೆಗೊಳ್ಳಬಹುದು  ಎಂದು ರತ್ನಾ ಪಾಠಕ್ ಷಾ ಬುಧವಾರ ಪಿಟಿಐಗೆ ತಿಳಿಸಿದ್ದಾರೆ.

ತಮ್ಮ ಚಲನಚಿತ್ರ ವೃತ್ತಿಜೀವನದಲ್ಲಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿರುವ ಷಾ ಅವರು ಕೊನೆಯ ಬಾರಿಗೆ 2020 ರಲ್ಲಿ 'ಮೀ ರಕ್ಸಮ್' ನಲ್ಲಿ ನಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News