ಡಿಸೆಂಬರ್ ಬಳಿಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಹಮ್ಮದ್ ಹಾರಿಸ್ ನಲಪಾಡ್ ?

Update: 2021-06-30 12:06 GMT
ಮುಹಮ್ಮದ್ ಹಾರಿಸ್ ನಲಪಾಡ್- ರಕ್ಷಾ ರಾಮಯ್ಯ

ಬೆಂಗಳೂರು, ಜೂ. 30: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿವಾದ ಕೊನೆಗೂ ಬಗೆಹರಿಯುವ ಲಕ್ಷಣಗಳು ಕಂಡುಬರುತ್ತಿದ್ದು, ಡಿಸೆಂಬರ್ ಅಂತ್ಯದವರೆಗೆ ಹಾಲಿ ಅಧ್ಯಕ್ಷ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಆ ಬಳಿಕ ಮುಹಮ್ಮದ್ ಹಾರಿಸ್ ನಲಪಾಡ್ ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ಗೊತ್ತಾಗಿದೆ.

ಮುಹಮ್ಮದ್ ನಲಪಾಡ್ ಮತ್ತು ರಕ್ಷಾ ರಾಮಯ್ಯ ಅವರನ್ನು ಮುಖಾಮುಖಿ ಕೂರಿಸಿಕೊಂಡು ಚರ್ಚಿಸಿ ಸಂಧಾನ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಂಧಾನ ಸೂತ್ರವನ್ನು ಮಂಡಿಸಲಾಗಿದೆ. ಇದಕ್ಕೆ ಉಭಯ ನಾಯಕರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಫೆಬ್ರವರಿಯಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮುಹಮ್ಮದ್ ಹಾರಿಸ್ ನಲಪಾಡ್ 50 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ರಕ್ಷ ರಾಮಯ್ಯ ಅವರಿಗಿಂತ 14 ಸಾವಿರಕ್ಕೂ ಹೆಚ್ಚು ಮತಗಳಿಕೆಯಲ್ಲಿ ಮುಂದಿದ್ದರು. ಆದರೆ, ಕ್ರಿಮಿನಲ್ ಹಿನ್ನಲೆ ಇದೆ ಎಂಬ ಕಾರಣಕ್ಕಾಗಿ ಮುಹಮ್ಮದ್ ನಲಪಾಡ್ ಅವರನ್ನು ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಬಳಿಕ ನಲಪಾಡ್ ಅವರಿಗಿಂತ ಕಡಿಮೆ ಮತ ಗಳಿಕೆ ಮಾಡಿದ್ದ ರಕ್ಷಾ ರಾಮಯ್ಯ ಅವರನ್ನು ಅಧಿಕೃತವಾಗಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿತ್ತು. ಆದರೆ, ಇದನ್ನು ಒಪ್ಪಿಕೊಳ್ಳದ ನಲಪಾಡ್ ಪರ್ಯಾಯವಾಗಿ ಯುವ ಕಾಂಗ್ರೆಸ್ ಸಂಘಟನೆ ಮಾಡುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News