ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ.ಮಂಜುನಾಥ್ ಸೇವಾವಧಿ ಒಂದು ವರ್ಷ ವಿಸ್ತರಣೆ
Update: 2021-06-30 18:46 IST
ಬೆಂಗಳೂರು, ಜೂ.30: ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸೇವೆಯನ್ನು ಒಂದು ವರ್ಷಗಳ ಕಾಲ (ಜೂನ್, 2022ರವರೆಗೆ) ವಿಸ್ತರಿಸಿ ರಾಜ್ಯ ಸರಕಾರ ಆದೇಶಿಸಿದೆ.
ಡಾ.ಮಂಜುನಾಥ್‍ರ ವಿಸ್ತರಿತ ಸೇವಾ ಅವಧಿ ಇಂದು (ಜೂ.30) ಅಂತ್ಯವಾಗಲಿತ್ತು. ಕೋವಿಡ್ ಸಂದರ್ಭದ ಹಿನ್ನೆಲೆಯಲ್ಲಿ ಅವರ ಸೇವಾವಧಿಯನ್ನು ವಿಸ್ತರಿಸುವಂತೆ ನಾಡಿನ ಪ್ರಮುಖರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಸೇವಾವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.