ಜು.1ರಂದು ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ
Update: 2021-06-30 20:38 IST
ಉಡುಪಿ, ಜೂ.30: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್ಕ್ಲಬ್ ಸಹಯೋಗದಲ್ಲಿ ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾ ದಿನಾಚರಣೆಯನ್ನು ಏರ್ಪಡಿಸ ಲಾಗಿದೆ.
ಕಾರ್ಯಕ್ರಮವನ್ನು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹಾಗೂ ವಕೀಲ ವಿವೇಕಾನಂದ ಪನಿಯಾಲ ಉದ್ಘಾಟಿಸಿ ಮಾಧ್ಯಮ ಮತ್ತು ಕಾನೂನು ಕುರಿತು ವಿಚಾರ ಮಂಡಿಸಲಿದ್ದಾರೆ. ಬಳಿಕ ಇವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಇದೇ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉಚಿತ ಸಾಮಾನ್ಯ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.