ಅಕ್ರಮ ಜಾನುವಾರು ಸಾಗಾಟ ಆರೋಪ: ಓರ್ವ ಸೆರೆ
Update: 2021-06-30 22:29 IST
ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪಿಕರ್ ಸಹಿತ ಓರ್ವನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕಸ್ಬಾ ಕರ್ಕುಂಜ ನಿವಾಸಿ ಹಂಝ (42) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪಿಕಪ್ ಹಾಗು 2 ಹಸುಗಳನ್ನು ವಶಪಡಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.