×
Ad

ನವ ವಿವಾಹಿತೆ ಸಾವು: 'ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ' ಎಂದು ಆರೋಪಿಸಿದ ಪೋಷಕರು

Update: 2021-06-30 23:07 IST

ದಾವಣಗೆರೆ, ಜೂ.30: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾದ ಘಟನೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.

ಹೊಸ ಕುಂದುವಾಡ ಗ್ರಾಮದ ರೂಪಾ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ್ ಅವರೊಂದಿಗೆ ವಿವಾಹ ಆಗಿತ್ತು. ಮದುವೆಯಾಗಿ ಆರು ತಿಂಗಳ ನಂತರ ಜಯಪ್ರಕಾಶ್ ಆಕೆಗೆ ವರದಕ್ಷಿಣೆ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಜೊತೆಗೆ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ.

ಆಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಗಿರೀಶ್ ಶವಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News