×
Ad

ಉಡುಪಿ : ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರಿಗೆ ಸಸಿ ವಿತರಣೆ

Update: 2021-07-01 17:08 IST

ಉಡುಪಿ, ಜು.1: ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ಬ್ರಹ್ಮಾವರ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರಿಗೆ ಗುರುವಾರ ಉಡುಪಿ ಪ್ರೆಸ್ಕ್ಲಬ್ನಲ್ಲಿ ಹಣ್ಣಿನ ಮತ್ತು ಔಷಧೀಯ ಸಸ್ಯಗಳು ಮತ್ತು ಲೇಖನ ಸಾಮಗ್ರಿ ಗಳನ್ನು ವಿತರಿಸಲಾಯಿತು.

ಗಿಡಗಳ ಪ್ರಾಯೋಜಕರಾದ ಮಧುಸೂದನ್ ಹೇರೂರು ಮಾತನಾಡಿ, ಈಗಾಗಲೇ ವಿವಿಧ ಧಾರ್ಮಿಕ ಕೇಂದ್ರಗಳಿಗೆ 3 ಸಾವಿರ ಸಸಿಗಳನ್ನು ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೂ ಸಸಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ವಾರ್ತಾಧಿಕಾರಿ ವಿ.ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಸುವರ್ಣ ಎಂಟರ್ಪ್ರೈಸಸ್ ಮುಖ್ಯಸ್ಥೆ ಸುನೀತಾ ಮಧುಸೂದನ್, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಮಿಲ್ಟನ್ ಒಲಿವೇರಾ, ದರ್ಶಕ್, ಗಣೇಶ್ ಪ್ರಸಾದ್ ಜಿ.ನಾಯಕ್, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News