ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: ಬಿಬಿಎಂಪಿಯಿಂದ ಮಾಹಿತಿ ಕೇಳಿದ ಹೈಕೋರ್ಟ್

Update: 2021-07-01 12:30 GMT

ಬೆಂಗಳೂರು, ಜು.1: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿಗೆ ಮಾಹಿತಿ ನೀಡಲು ಸೂಚನೆ ನೀಡಿದೆ.

ಈ ಕುರಿತು ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ. 

ಅರ್ಜಿದಾರರ ಪರ ವಾದಿಸಿದ ವಕೀಲರು, ದೇಶದ ಇತರೆ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ ಶೌಚಾಲಯಗಳ ಕೊರತೆ ಹೆಚ್ಚು ಇದೆ. ಇರುವ ಶೌಚಾಲಯಗಳಿಗೆ ಸರಿಯಾದ ಬಾಗಿಲುಗಳಿಲ್ಲ, ದೋಷಯುಕ್ತವಾದ ಫ್ಲಶ್‍ಗಳು, ನೀರಿನ ಸರಬರಾಜು ಕೊರತೆ ಇದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ? ಪ್ರತಿ ವಾರ್ಡ್ ನಲ್ಲಿ ಎಷ್ಟು ಶೌಚಾಲಯಗಳ ಕೊರತೆಯಿದೆ? ಈ ಕುರಿತು ಮಾಹಿತಿ ನೀಡಿ ಎಂದು ಬಿಬಿಎಂಪಿಗೆ ಸೂಚಿಸಿದೆ. ಜತೆಗೆ ಕೈಗೊಂಡ ಕ್ರಮದ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News