ಮನೆಗಳ ನಿರ್ಮಾಣ ಟೆಂಡರ್ ರದ್ದು ಕೋರಿ ಅರ್ಜಿ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
Update: 2021-07-01 18:20 IST
ಬೆಂಗಳೂರು, ಜು.1: ರಾಜ್ಯದ ಕೊಳೆಗೇರಿಗಳಲ್ಲಿ ಆರು ಸಾವಿರ ಕೋಟಿ ರೂ. ವೆಚ್ಚದಲ್ಲಿ 97 ಸಾವಿರ ಮನೆಗಳನ್ನು ನಿರ್ಮಾಣಕ್ಕೆ ಕೊಳಗೇರಿ ಅಭಿವೃದ್ಧಿ ಮಂಡಳಿ ಕರೆದಿರುವ ಟೆಂಡರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ, ಕರ್ನಾಟಕ ಗೃಹ ಮಂಡಳಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು.