×
Ad

ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ

Update: 2021-07-01 19:57 IST

ಮಂಗಳೂರು, ಜು.1: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್‌ಗಳನ್ನು ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪದವಿನಂಗಡಿಯ ಕಟ್ಟಡ ನಿರ್ಮಾಣದ ಸ್ಥಳದಲ್ಲಿನ 52 ಕಟ್ಟಡ ಕಾರ್ಮಿಕರಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ. ಶಿಲ್ಪಾ ಸುರಕ್ಷತಾ ಕಿಟ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಎ.ಜೆ. ಶಿಲ್ಪಾ, ಮಹಿಳೆಯರು ಮತ್ತು ಪುರುಷ ಕಾರ್ಮಿ ಕರಿಗೆ ಕಾರ್ಮಿಕ ಇಲಾಖೆಯಿಂದ ಪ್ರತ್ಯೇಕವಾಗಿ ಒದಗಿಸಿರುವ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್‌ಗಳನ್ನು ಸದುಪಯೋಗಿಸಿಕೊಳ್ಳಬೇಕು. ಕೆಲಸದ ಸ್ಥಳದಲ್ಲಿ ನೈರ್ಮಲ್ಯ ಮತ್ತು ಸುರಕ್ಷಿತ ಅಂತರ ಕಾಪಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಸೂಚಿಸಿದರು.

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ್ ಮಾತನಾಡಿ, ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರಿಗೆ ಶೈಕ್ಷಣಿಕ, ಪೆನ್ಶನ್, ಮದುವೆ, ಹೆರಿಗೆ, ವೈದ್ಯಕೀಯ ವೆಚ್ಚ ಮುಂತಾದ ಸೌಲಭ್ಯಗಳನ್ನು ನೀಡುತ್ತಿದೆ. ನೋಂದಾಯಿತ ಕಾರ್ಮಿಕರಿಗೆ ಕೋವಿಡ್ ಹಿನ್ನೆಲೆಯಲ್ಲಿ 3,000 ರೂ. ನೇರವಾಗಿ ಅವರ ಖಾತೆಗಳಿಗೆ ಜಮೆ ಮಾಡಲಾಗಿದೆ. ಎಲ್ಲ ಕಾರ್ಮಿಕರು ಸರಕಾರದಿಂದ ಬಂದಿರುವ ಆಹಾರ ಮತ್ತು ಸುರಕ್ಷತಾ ಕಿಟ್‌ಗಳನ್ನು ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ, ಅಮರೇಂದ್ರ, ಹಿರಿಯ ಕಾರ್ಮಿಕ ನಿರೀಕ್ಷಕರು, ಮೇರಿ ಡಯಾಸ್ ಮತ್ತು ವಿರೇಂದ್ರ ಕುಂಬಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News