ಪುತ್ತೂರಿನಲ್ಲಿ ಗಾಂಧೀಜಿ ಪ್ರತಿಮೆಗೆ ಅವಮಾನ: ದೂರು ದಾಖಲು
Update: 2021-07-01 20:11 IST
ಪುತ್ತೂರು: ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಗಾಂಧಿ ಕಟ್ಟೆಯಲ್ಲಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಬುಧವಾರ ತಡರಾತ್ರಿ ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಯ ಮೇಲೆ ಇರಿಸಿ, ಪ್ರತಿಮೆಯ ತಲೆಗೆ ಟೀ ಶರ್ಟ್ ಇಟ್ಟು ಗಾಂಧೀಜಿಯನ್ನು ಅವಮಾನಿಸಿದ್ದಾರೆ. ಘಟನೆಗೆ ಸಂಬಂಧಿಸಿ ಪುತ್ತೂರಿನ ಗಾಂಧಿಕಟ್ಟೆ ಸಮಿತಿಯು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿ.ವೈ.ಎಸ್.ಪಿ. ಡಾ. ಗಾನ ಪಿ ಕುಮಾರ್ ಮತ್ತು ಪುತ್ತೂರು ನಗರ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.