×
Ad

ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ: ಮಾಜಿ ಸಚಿವ ಕೆ.ಅಭಯಚಂದ್ರ ಜೈನ್

Update: 2021-07-02 16:44 IST

ಮಂಗಳೂರು, ಜು.2: ಕಾಂಗ್ರೆಸ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಅವಕಾಶ ನೀಡುವುದು ಅತೀ ಅಗತ್ಯವಾಗಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅಭಿಪ್ರಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಬದಲಾವಣೆ ಅಗತ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಯುವಕರಿಗೆ ಅವಕಾಶ ಒದಗಿಸಬೇಕು ಎಂದರು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ನಾನು ಯುವಕರಿಗೆ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದ್ದೆ. ಆದರೂ ನಾನು ಸ್ಪರ್ಧಿಸಬೇಕಾಯಿತು. ಕೊನೆಗೆ ಸೋಲಬೇಕಾಯಿತು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಯುವಕರಿಗೆ ಸ್ಥಾನ ನೀಡುವುದು ಇಂದಿನ ರಾಜಕೀಯದ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ನಾನು ಈಗಾಗಲೇ ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಯಂ ಆಗಿ ನಿರ್ಧರಿಸಿ, ಯುವಕರಿಗೆ ಸ್ಥಾನ ನೀಡಿ ಗೆಲ್ಲಿಸಲು ನಾನು ನಿರ್ಧರಿಸಿದ್ದೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News