ಸಚಿವ ಶ್ರೀರಾಮುಲು ಆಪ್ತ ಸಹಾಯಕನ ಬಂಧನದ ಬಗ್ಗೆ ದೂರುದಾರ ಬಿ.ವೈ.ವಿಜಯೇಂದ್ರ ಹೇಳಿದ್ದೇನು ?

Update: 2021-07-02 11:16 GMT

ಬೆಂಗಳೂರು, ಜು. 2: `ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ನೀಡಲಾದ ದೂರಿನ ಬೆನ್ನಲ್ಲೇ ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕ ರಾಜು ಯಾನೆ ರಾಜಣ್ಣ ಎಂಬಾತನನ್ನು ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು.

ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಬಿ.ವೈ.ವಿಜಯೇಂದ್ರ, `ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದಿರಬೇಕೆಂದು ವಿನಂತಿಸುವೆ' ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News