×
Ad

ದಾಸಪ್ಪ ಪಕ್ಕಳ

Update: 2021-07-02 17:47 IST

ಪುತ್ತೂರು: ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ  ಅಂಜನಕೋಡಿ ನಿವಾಸಿ ದಾಸಪ್ಪ ಪಕ್ಕಳ(78) ಹೃದಯಾಘಾತದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕೃಷಿಕರಾಗಿದ್ದ ಅವರು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರದ ದೇವಳದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಸುಡುಮದ್ದು (ಬೆಡಿ)ಗೆ ದೇಣಿಗೆ ಸಂಗ್ರಹಿಸುವ ಸೇವೆಯನ್ನು ಸುಮಾರು 40 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದರು. ವಾರ್ಧಕ್ಯದ ಹಿನ್ನಲೆ ಯಲ್ಲಿ ಕಳೆದ ವರ್ಷದಿಂದ ದೇಣಿಗೆ ಸಂಗ್ರಹ ಕಾರ್ಯವನ್ನು ನಿಲ್ಲಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ 7 ಮಂದಿ ಪುತ್ರಿಯರನ್ನು ಅಗಲಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೊಜ ಸೇರಿದಂತೆ ಹಲವು ಮಂದಿ ಗಣ್ಯರು ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News