ಅಪರ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Update: 2021-07-02 20:43 IST
ಉಡುಪಿ, ಜು.2: ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ತಾಲೂಕು ಅಪರ ಸರಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರಕಾರವು ಮಂಜೂರಾತಿ ನೀಡಿದ್ದು, ಏಳು ವರ್ಷಗಳ ಕಾಲ ವಕೀಲರ ವೃತ್ತಿ ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.