×
Ad

ಜು.3: ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾ ಶಿಬಿರವಿಲ್ಲ

Update: 2021-07-02 21:24 IST

ಮಂಗಳೂರು, ಜು.2: ದ.ಕ. ಜಿಲ್ಲೆಯಲ್ಲಿ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನ್‌ಗೆ ಸಂಬಂಧಿಸಿದಂತೆ ಇದೇ ಜು.3ರಂದು ಕಾಲೇಜು ವಿದ್ಯಾರ್ಥಿಗಳ ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆ ತಿಳಿಸಿದೆ.

ಉಳಿದಂತೆ ಕೋವಿಶೀಲ್ಡ್ ಲಸಿಕೆಯು ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಎರಡನೇ ಡೋಸ್ ಲಸಿಕಾ ಫಲಾನುಭವಿಗಳಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶವಿದೆ.

ಬೆಳ್ತಂಗಡಿ ತಾಲೂಕು ಆಸ್ಪತ್ರೆ ಹಾಗೂ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದ ಫಲಾನುಭವಿ ಗಳಿಗೆ ಮಾತ್ರ ಲಸಿಕೆ ನೀಡಲಾಗುವುದು. ಜಿಲ್ಲಾ ವೆನ್ಲಾಕ್ ಆಸತ್ರೆಯಲ್ಲಿ ಕೋವಿಶೀಲ್ಡ್‌ನ 2ನೇ ಡೋಸ್, ಕೋವ್ಯಾಕ್ಸಿನ್ ಪ್ರಥಮ ಹಾಗೂ ದ್ವಿತೀಯ ಡೋಸ್ ಹಾಗೂ ಎನ್‌ಆರ್‌ಐಗಳಿಗೆ ಲಸಿಕಾ ಸೌಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News