ವಿದೇಶಗಳಿಂದ ಬರುವವರ ಸಂಖ್ಯೆಯನ್ನು ಅರ್ಧಕ್ಕಿಳಿಸಲು ಆಸ್ಟ್ರೇಲಿಯ ನಿರ್ಧಾರ

Update: 2021-07-02 15:54 GMT

ಸಿಡ್ನಿ (ಆಸ್ಟ್ರೇಲಿಯ), ಜು. 2: ದೇಶವನ್ನು ಪ್ರವೇಶಿಸುವ ಜನರ ಸಂಖ್ಯೆಯನ್ನು ಅರ್ಧಕ್ಕೆ ಇಳಿಸುವ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಆಸ್ಟ್ರೇಲಿಯ ಶುಕ್ರವಾರ ಘೋಷಿಸಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೋನ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ದೇಶದ ಹೆಚ್ಚಿನ ನಗರಗಳು ಲಾಕ್ಡೌನ್ನಲ್ಲಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಅದು ಅಭಿಪ್ರಾಯಪಟ್ಟಿದೆ.

‌ದೇಶದ ಅರ್ಧಕ್ಕಿಂತಲೂ ಹೆಚ್ಚಿನ ಜನರು ಲಾಕ್ಡೌನ್ನಿಂದಾಗಿ ಮನೆಯಲ್ಲೇ ಇದ್ದಾರೆ.
ಸಾಂಕ್ರಾಮಿಕ ಇನ್ನಷ್ಟು ಹರಡುವುದನ್ನು ತಡೆಯಲು ವಿದೇಶಗಳಿಂದ ಬರುವವರ ಸಂಖ್ಯೆಯನ್ನು ಅರ್ಧಕ್ಕೆ ಇಳಿಸಲಾಗುವುದು ಎಂದು ಪ್ರಧಾನಿ ಸ್ಕಾಟ್ ಮೊರಿಸನ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News