ಬೆಂಗಳೂರು ವಿಮಾನ ನಿಲ್ದಾಣದಲ್ಲಿ 56 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

Update: 2021-07-02 16:35 GMT

ಬೆಂಗಳೂರು, ಜು.2: ಇಲ್ಲಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸುಮಾರು 56 ಕೋಟಿ ರೂ. ಮೌಲ್ಯದ 8 ಕೆಜಿ ಹೆರಾಯಿನ್ ಜಪ್ತಿ ಮಾಡಿದ್ದಾರೆ.

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 35 ವರ್ಷದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಈ ಸಂಬಂಧ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News