ಸುಳ್ಯ: ಕೆ.ಎಸ್.ದೇವರಾಜ್ ನಿಧನ
Update: 2021-07-03 16:46 IST
ಸುಳ್ಯ: ಹಿರಿಯ ರಾಜಕರಣಿ ಕೆ.ಎಸ್.ದೇವರಾಜ್ (55) ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ದಕ್ಷಿಣ ಕನ್ಬಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ದೇವರಾಜ್ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮುಖಂಡರಾಗಿದ್ದ ಕೆ.ಎಸ್.ದೇವರಾಜ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಖರ ವಾಗ್ಮಿಯಾಗಿದ್ದ ಕೆ.ಎಸ್.ದೇವರಾಜ್ ರಾಜಕೀಯ, ಸಾಮಾಜಿಕ, ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.