ಬೈಕ್ ಅಪಘಾತ: ನಿರ್ದೇಶಕ ಸೂರ್ಯೋದಯ ಪುತ್ರ ಮೃತ್ಯು
Update: 2021-07-03 17:50 IST
ಬೆಂಗಳೂರು, ಜು.3: ವೇಗವಾಗಿ ಹೋಗುತ್ತಿದ್ದ ಬೈಕ್ ಟ್ಯಾಂಕರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಟ, ನಿರ್ದೇಶಕ ಸೂರ್ಯೋದಯ ಅವರ ಪುತ್ರ ಸಾವನ್ನಪ್ಪಿರುವ ಘಟನೆ ಇಲ್ಲಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೂರ್ಯೋದಯ ಅವರ ಪುತ್ರ ಮಯೂರ್(20) ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ.
ಶುಕ್ರವಾರ ತಡರಾತ್ರಿ ಮನೆಗೆ ಹೋಗುವಾಗ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.