×
Ad

ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಟರ್ಪಾಲ್ ವಿತರಣೆ

Update: 2021-07-03 18:10 IST

ಮಂಗಳೂರು, ಜು.3: ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿ ಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಟರ್ಪಾಲ್ ವಿತರಿಸಿದರು.

ತೌಕ್ತೆ ಚಂಡಮಾರುತದ ಹಾವಳಿಯಿಂದ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳ ಟರ್ಪಾಲ್ಗಳಿಗೆ ತೀವ್ರ ಹಾನಿಯಾಗಿ ದ್ದವು. ಇದರಿಂದ ಈ ಕುಟುಂಬ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದವು. ಈ ಬಗ್ಗೆ ಡಿವೈಎಫ್‌ಐ ಸಂಘಟನೆಯ ಪ್ರಮುಖರು ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಟರ್ಪಾಲ್ ಸಹಿತ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ದ್ದರು. ಜಿಲ್ಲಾಧಿಕಾರಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ನೀಡಿದ್ದರು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಸಿಇಒ ಕುಮಾರ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News