ಜು. 5: ಮಂಗಳೂರಿಗೆ ಡಿ.ಕೆ. ಶಿವಕುಮಾರ್ ಆಗಮನ
Update: 2021-07-03 18:15 IST
ಮಂಗಳೂರು, ಜು.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜು.5ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 1:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮಧ್ಯಾಹ್ನ 2:30ಕ್ಕೆ ಸುಲ್ತಾನ್ ಬತ್ತೇರಿಯ ಬೋಳೂರು ಮೊಘವೀರರ ಸಭಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೊಘವೀರರ ಕುಂದುಕೊರತೆಗಳ ಅಧ್ಯಯನ ಸಭೆಯಲ್ಲಿ ಭಾಗವಹಿಸಲಿರುವರು.
ನಂತರ ಸಂಜೆ 6 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕೋವಿಡ್ ಸಹಾಯ ಹಸ್ತದ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜು.6ರಂದು ಉಡುಪಿಗೆ ತೆರಳಲಿರುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.