×
Ad

ಪದವಿ, ಎಂಜಿನಿಯರಿಂಗ್ ಪರೀಕ್ಷೆ ರದ್ದಿಗೆ ಆಗ್ರಹಿಸಿ ರಾಜ್ಯಾದ್ಯಂತ ವಿದ್ಯಾರ್ಥಿಗಳಿಂದ ಧರಣಿ

Update: 2021-07-03 18:41 IST

ಬೆಂಗಳೂರು, ಜು.3: ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಸೆಮಿಸ್ಟರ್(1, 3, 5) ಪರೀಕ್ಷೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆಂದು ಎಐಡಿಎಸ್‍ಒ ರಾಜ್ಯಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ಎರಡನೆ ಅಲೆಯಿಂದಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್‍ಡೌನ್ ಆಗಿತ್ತು. ಹಾಗೂ ಪ್ರತಿಯೊಂದು ಕುಟುಂಬವು ಕೋವಿಡ್ ಸಂಕಷ್ಟದಿಂದ ನಲುಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರಕಾರ ಪದವಿ, ಎಂಜಿನಿಯರಿಂಗ್ ತರಗತಿಗಳನ್ನು ನಡೆಸಲು ಮುಂದಾಗಿರುವುದು ಎಷ್ಟು ಸರಿಯೆಂದು ವಿದ್ಯಾರ್ಥಿಗಳೇ ಪ್ರಶ್ನಿಸುತ್ತಿದ್ದಾರೆಂದು ತಿಳಿಸಿದ್ದಾರೆ.

ಎಐಡಿಎಸ್‍ಒ ವತಿಯಿಂದ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಲಾಯಿತು. ಇದರಲ್ಲಿ ಶೇ.90ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಕೋವಿಡ್ ಆತಂಕದ ಪರಿಣಾಮ ಹಾಗೂ ಆನ್‍ಲೈನ್ ಹಾಗೂ ಆಫ್‍ಲೈನ್ ತರಗತಿ ನಡೆಯದ ಕಾರಣ ಪರೀಕ್ಷೆ ನಡೆಸುವುದು ಬೇಡವೆಂದು ಅಭಿಪ್ರಾಯಿಸಿದ್ದಾರೆ. ಆದರೂ ರಾಜ್ಯ ಸರಕಾರ ವಿದ್ಯಾರ್ಥಿಗಳ ಅಭಿಪ್ರಾಯಕ್ಕೂ ಮನ್ನಣೆಕೊಡದೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲವೆಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News