``ಮೇಕೆದಾಟು ಯೋಜನೆ' ಸಂಬಂಧ ವೃದ್ಧಿಗೆ ಎದುರು ನೋಡುತ್ತಿದ್ದೇನೆ”:ತಮಿಳುನಾಡು ಸಿಎಂ ಸ್ಟಾಲಿನ್ ಗೆ ಯಡಿಯೂರಪ್ಪ ಪತ್ರ
ಬೆಂಗಳೂರು, ಜು. 3: `ಮೇಕೆದಾಟು ಯೋಜನೆ'ಯಿಂದ ಕರ್ನಾಟಕ ಮತ್ತು ತಮಿಳುನಾಡು ಸಹಿತ ಉಭಯ ರಾಜ್ಯಗಳಿಗೆ ಅನುಕೂಲವಾಗಲಿದೆ. ತಮಿಳುನಾಡಿನ ರೈತರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಹೀಗಾಗಿ ಉದ್ದೇಶಿತ ಯೋಜನೆಗೆ ಆಕ್ಷೇಪ ಸರಿಯಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.
`ಉದ್ದೇಶಿತ ಮೇಕೆದಾಟು ಯೋಜನೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆ 4.75 ಟಿಎಂಸಿ ಹೆಚ್ಚುವರಿ ನೀರು ಶೇಖರಣೆಯ ಕುಡಿಯುನ ನೀರಿನ ಯೋಜನೆ ಇದಾಗಿದೆ. ಆದರೆ, ನೀವು ಈ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಹಲವು ಅರ್ಜಿ ಸಲ್ಲಿಸಿದ್ದೀರಿ. ಆದರೆ, ರಾಜ್ಯ ಸರಕಾರ ಯೋಜನೆಗೆ ಅನುಮೋದನೆ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ' ಎಂದು ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದಾರೆ.
`ಉಭಯ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಎರಡು ರಾಜ್ಯಗಳ ನಡುವೆ ಉತ್ತಮ ಸಂಬಂಧ ವೃದ್ಧಿಗಾಗಿ ನಾನು ಎದುರು ನೋಡುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ತಮಿಳುನಾಡಿ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.