ದ.ಕ. ಜಿಲ್ಲೆ: ಕೋವಿಡ್‌ಗೆ 13 ಬಲಿ; 214 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜು. 3: ದ.ಕ. ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ಗೆ 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1,235ಕ್ಕೇರಿದೆ.ಶನಿವಾರ 214 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈವರೆಗೆ
ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 93,653ಕ್ಕೇರಿದೆ. ಅಲ್ಲದೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ. 2.32ಕ್ಕಿಳಿದಿದೆ.
ಶನಿವಾರ 333 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 88,648ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,770 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,68,597 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 9,74,944 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 77,802 ಮಂದಿಯಿಂದ 94,93,217 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್: 29 ಸಕ್ರಿಯ ಪ್ರಕರಣ
ದ.ಕ. ಜಿಲ್ಲೆಯಲ್ಲಿ ಶನಿವಾರ ಬ್ಲ್ಯಾಕ್ ಫಂಗಸ್ ಹೊಸ ಪ್ರಕರಣ ಬೆಳಕಿಗೆ ಬಂದಿಲ್ಲ. ಆದರೆ ಸದ್ಯ ಜಿಲ್ಲೆಯಲ್ಲಿ 29 ಸಕ್ರಿಯ ಪ್ರಕರಣ ಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 22 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ.
ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ. ಅಲ್ಲದೆ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ಬಲಿಯಾದವರ ಸಂಖ್ಯೆ 21ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 16 ಮಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.