×
Ad

ಮೀನುಗಾರಿಕಾ ಇಲಾಖೆಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Update: 2021-07-03 20:18 IST

ಉಡುಪಿ, ಜು.3: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News