×
Ad

ಜು.5ರಿಂದ ಮಸೀದಿ, ಮಂದಿರ, ಚರ್ಚ್ ಸಹಿತ ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದು : ದ.ಕ. ಜಿಲ್ಲಾಧಿಕಾರಿ

Update: 2021-07-03 21:39 IST

ಮಂಗಳೂರು, ಜು.3: ರಾಜ್ಯ ಸರಕಾರವು ಹೊರಡಿಸಿದ ಹೊಸ ಮಾರ್ಗಸೂಚಿಯ ಅನ್ವಯ ಜು.5ರ ಸೋಮವಾರದಿಂದ ಮಸೀದಿ, ಮಂದಿರ, ಚರ್ಚ್ ಸಹಿತ ಧಾರ್ಮಿಕ ಕೇಂದ್ರಗಳನ್ನು ತೆರೆಯಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ. ಅದರಂತೆ ಮಸೀದಿ, ಮಂದಿರ, ಚರ್ಚ್‌ಗಳನ್ನು ತೆರೆಯಬಹುದಾಗಿದೆ. ಆದರೆ ಕೋವಿಡ್-19 ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News