×
Ad

ಕೋವಿಡ್ ಮಾರ್ಗಸೂಚಿಯೊಂದಿಗೆ ಮಸೀದಿಗಳಲ್ಲಿ ನಮಾಝ್ ನಿರ್ವಹಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

Update: 2021-07-04 13:40 IST

ಉಡುಪಿ, ಜು.4: ಮಸೀದಿಯಲ್ಲಿ ನಮಾಝ್ ನಿರ್ವಹಿಸುವ ಸಂದರ್ಭ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ ಮಾಡಿದೆ.

ರಾಜ್ಯ ಸರಕಾರವು ಜು.5ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಆದರೂ ಕೊರೋನ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಕೋವಿಡ್ 19ರ 3ನೇ ಅಲೆಯ ಎಚ್ಚರಿಕೆಯ ಗಂಟೆ ಈಗಾಗಲೇ ನಮ್ಮನ್ನು ಕಾಡುತ್ತಿದೆ. ಸರಕಾರವು ಮಸೀದಿಗಳಲ್ಲಿ ನಮಾಝ್ ಆರಂಭಿಸಲು ಅನುಮತಿಸಿದೆಯಾದರೂ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಎಂಬ ಶರ್ತವನ್ನೂ ವಿಧಿಸಿದೆ. ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಸೀದಿಗಳಲ್ಲಿ ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಮತ್ತು ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮಸೀದಿಗಳನ್ನು ತೆರೆಯಬೇಕು. ಆ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಸರಕಾರದೊಂದಿಗೆ ಸಹಕರಿಸಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಇಬ್ರಾಹೀಂ ಸಾಹೇಬ್ ಕೋಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News