ಗಾಂಜಾ ಮಾರಾಟ: ಮೂವರು ಆರೋಪಿಗಳ ಬಂಧನ
Update: 2021-07-04 17:06 IST
ಶಿವಮೊಗ್ಗ(ಜು.4): ಗೋಪಾಳದ ಶ್ರೀರಾಮನಗರ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಟಿಪ್ಪುನಗರ ನಿವಾಸಿಗಳಾದ ಸುಹೇಲ್ ಖಾನ್(24), ಅಯೂಬ್ ಖಾನ್(21), ಅಮ್ಜದ್ (20) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 30 ಸಾವಿರ ರೂ. ಮೌಲ್ಯದ 1 ಕೆ.ಜಿ 350 ಗ್ರಾಂ ತೂಕದ ಒಣ ಗಾಂಜಾ, 870 ರೂ. ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಡಿ.ವೈ.ಎಸ್.ಪಿ ಪ್ರಶಾಂತ್ ಮುನ್ನೋಳಿ ನೇತೃತ್ವದಲ್ಲಿ ತುಂಗಾನಗರ ಪಿ.ಐ ದೀಪಕ್, ಪಿಎಸ್ಐ ತಿರುಮಲೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.