×
Ad

ಜು.5ರಿಂದ ಕೋವಿಡ್ ನಿಯಮ ಪಾಲನೆಯೊಂದಿಗೆ ಮಸೀದಿಗಳಲ್ಲಿ ನಮಾಝ್‌ಗೆ ಅವಕಾಶ: ಉಡುಪಿ ಡಿಸಿ

Update: 2021-07-04 18:07 IST

ಉಡುಪಿ, ಜು.4: ರಾಜ್ಯ ಸರಕಾರದ ಆದೇಶದಂತೆ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಉಡುಪಿ ಜಿಲ್ಲೆಯ ಮಸೀದಿಗಳಲ್ಲಿ ಜು.5ರಿಂದ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು, ಸುರಕ್ಷಿತ ಅಂತರ ಕಾಪಾಡಿಕೊಂಡು ಹಾಗೂ ಮಸೀದಿಯ ಕಟ್ಟಡದ ಸಾಮರ್ಥ್ಯಕ್ಕೆ ಅನುಗುಣವಾಗಿ ಸಾಮೂಹಿಕ ನಮಾಝ್ ಮಾಡಬಹುದಾಗಿದೆ ಎಂದು ಅವರು 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News